ಬೆಳಗಾವಿ: ರಾಜ್ಯದಲ್ಲಿ ಕಂದಾಯ ಸರ್ಕಾರಿ ಭೂಮಿ ಒತ್ತುವರಿ ತಗೆಡೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಬೀಟ್ ಆ್ಯಪ್ ಎಂಬುದನ್ನು ತರಲಾಗಿದೆ. ಇದರ ಮೂಲಕ ಸರ್ಕಾರಿ ಜಮೀನು ರಕ್ಷಣೆ ಮಾಡುವಂತ ಕೆಲಸವಾಗುತ್ತಿದೆ. ಬೀಟ್ ಆ್ಯಪ್ ಮೂಲಕ ಸರ್ಕಾರಿ ಭೂಮಿ ಒತ್ತುವರಿ ತಡೆಯಬೇಕು ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಡಕ್ ಸೂಚನೆ ನೀಡಿದರು.
ಇಂದು ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಅವರು, ಸರ್ಕಾರಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಬೀಟ್ ಆ್ಯಪ್ ನೀಡಗಿದೆ. ಇದರ ಸಹಾಯದಿಂದ ಸರ್ಕಾರಿ ಆಸ್ತಿಯನ್ನು ಉಳಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಈ ಬಗ್ಗೆ ಗಮನ ಸೆಳೆದ ಅವರು, “ಎಲ್ಲಾ ಜಿಲ್ಲೆಯಲ್ಲೂ ಸರ್ಕಾರಿ ಭೂ ಒತ್ತುವರಿ ದೊಡ್ಡ ಸಮಸ್ಯೆಯಾಗಿದೆ. ಮುಖ್ಯಂತ್ರಿಗಳಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಹೀಗಾಗಿ ಮೊದಲು ನಮ್ಮ ದಾಖಲೆಯಲ್ಲಿರುವ ಸರ್ಕಾರಿ ಭೂಮಿಯನ್ನು ಗುರುತಿಸಿ ರಕ್ಷಿಸುವ ಕೆಲಸ ಆಗಬೇಕು. ಸರ್ಕಾರಿ ಭೂಮಿಗಳನ್ನು ಗುರುತಿಸಲು ” ಬೀಟ್” ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಈ ಆ್ಯಪ್ ಮೂಲಕ ಸರ್ಕಾರಿ ಭೂಮಿಯನ್ನು ಗುರುತಿಸಿ ಒತ್ತುವರಿ ತೆರವಿಗೆ ತಹಶೀಲ್ದಾರ್ ಗೆ ಪ್ರಸ್ತಾಪ ಸಲ್ಲಿಸಬೇಕು. ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ತನ್ನ ವ್ಯಾಪ್ತಿಯ ಸರ್ಕಾರಿ ಭೂಮಿಗೆ ತೆರಳಿ ಪರಿಶೀಲಿಸಿ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.
ಅಲ್ಲದೆ, ಇಂದಿನ ಚರ್ಚೆಯ ಅಜೆಂಡಾದಲ್ಲಿದ್ದ ಕೆಲವು ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ಮಾಡಲು ಸಾಧ್ಯವಾಗಿಲ್ಲ. ಹಾಗೆಂದು ಯಾವ ಕೆಲಸವೂ ನಿಲ್ಲುವಂತಿಲ್ಲ. ಜೊತೆಗೆ, ನಮ್ಮ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ. ಹೀಗಾಗಿ ನಾನು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಕೆಲವರಿಗೆ ಕೆಲಸದ ಹೊರೆ ಹೆಚ್ಚಾಗಿದೆ ಎಂಬ ಭಾವನೆ ಇದೆ. ಆದರೆ, ನಾವು ಕರ್ತವ್ಯ ವ್ಯಾಪ್ತಿ ಬಿಟ್ಟು ಯಾರಿಗೂ ಯಾವ ಕೆಲಸವನ್ನೂ ನೀಡಿಲ್ಲ. ಅಲ್ಲದೆ, ಜನಪರ ಸೇವೆ ನಮ್ಮ ವ್ಯಯಕ್ತಿಕ ಹಾಗೂ ಸಾಮೂಹಿಕ ಜವಾಬ್ದಾರಿ. ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅಳಿಲು ಸೇವೆಯನ್ನಾದರೂ ಮಾಡಿದರೆ ನಮ್ಮ ವೃತ್ತಿ ಜೀವನ ಸಾರ್ಥಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಲ್ಲಿ BBMPಯಿಂದ ಭರ್ಜರಿ ಕಾರ್ಯಾಚರಣೆ: 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ತೆರವು
ಉದ್ಯೋಗ ವಾರ್ತೆ: ‘ಪ್ರವಾಸಿ ಮಾರ್ಗದರ್ಶಿ ಹುದ್ದೆ’ಗಳಿಗಾಗಿ ಅರ್ಜಿ ಆಹ್ವಾನ