ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಲಾಗಿದ್ದ ಬದಲಾವಣೆಗೆಳನ್ನು ಪರಿಷ್ಕರಿಸಲು ರಚಿಸಲಾಗಿದ್ದ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿಯು ಜ.17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಬುಧವಾರ ಇಲಾಖೆ ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ಸಿದ್ಧತೆಗಳು ಮತ್ತು ಪುಸ್ತಕ ಪರಿಷ್ಕರಣೆ ಕುರಿತು ಸುದೀರ್ಘ ವಾಗಿ ಚರ್ಚೆಸಿದರು. ಇದೇವೇಳೆ, ಮುಂದಿನ ವರ್ಷಕ್ಕೆ ಪುಸ್ತಕಗಳ ಮುದ್ರಣಾ ಕಾರ್ಯ ಆರಂಭಿಸಬೇಕಿರುವ ಕಾರಣ ಆದಷ್ಟು ಬೇಗ ಶಾಲಾ ಪಠ್ಯ ಪರಿಷ್ಕರಣಾ ಸಮಿತಿ ವರದಿ ನೀಡಬೇಕು. ಜ.17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಇದೇ ವೇಳೆ ಈಗಾಗಲೇ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ವಾರದಲ್ಲಿ ಅಂತಿಮ ವರದಿ ವೇಳಾಪಟ್ಟಿ ಪ್ರಕಟಿಸುವುದಾಗಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರೆಂದು ತಿಳಿದು ಬಂದಿದೆ.
ಸಭೆಯಲ್ಲಿ ಇಲಾಖೆ ಪ್ರಧಾನ ಕಾಠ್ಯದರ್ಶಿ ರಿತೇಶ್ ಕುಮಾರ್‌ಸಿಂಗ್, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ, ಶಾಲಾ ಶಿಕ್ಷಣ ಆಯುಕ್ತ ಬಿ.ಬಿ. ಕಾವೇರಿ ಹಾಗೂ ಪಿಯು ಇಲಾಖೆ ನಿರ್ದೇಶಕಿ ಸಿಂಧು ಬಿ. ರೂಪೇಶ್ ಸೇರಿ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.