ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಕಠಿಣವಾದಂತಹ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.

ಈ ಒಂದು ಸಭೆಯಲ್ಲಿ ಪ್ರಜ್ವಲ್ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ, ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿರು. ಪ್ರಕರಣದ ಬೆಳವಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ ಔಟ್ ನೋಟಿಸ್ ಜೊತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ವಿವರಣೆ ನೀಡಿದರು. ಈ ವೇಳೆ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕಠಿಣ ಕ್ರಮ ಕೈಗೊಳ್ಳಿ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ.ಈ ವಿಚಾರದಲ್ಲಿ ನಿರ್ಲಕ್ಷ ಹಾಗೂ ವಿಳಂಬ ಧೋರಣೆ ಸಹಿಸಲಾಗದು. ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಹಿತಿ ನೀಡಿದ ಅಧಿಕಾರಿಗಳು, ಸೂಕ್ತ ಕ್ರಮಗಳೊಂದಿಗೆ ಆರೋಪಿಯ ಬಂಧನಕ್ಕೆ ಮುಂದಾಗುತ್ತೇವೆ. ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ.ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ರೇವಣ್ಣನನ್ನು ಬಂಧಿಸುತ್ತೇವೆ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Share.
Exit mobile version