ಬೆಂಗಳೂರು: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಪ್ರತಿಭಟನೆ ನಿರತರಾಗಿದ್ದ ಗ್ರಾಮ ಆಡಳಿತ ಅಧಿಕಾರಿಗಳು ಇಂದು ನನ್ನನ್ನು ಭೇಟಿಯಾಗಿ ಚರ್ಚಿಸಿದರು. ಎಲ್ಲರೂ ಒಟ್ಟಾಗಿ ಜನಪರ ಕೆಲಸಕ್ಕೆ ಮುಂದಾಗೋಣ ಎಂಬ ಮಾತನ್ನು ಗೌರವಿಸಿ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳನ್ನು ಒಳಗೊಂಡ ತಂಡ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಹೂಗುಚ್ಚ ನೀಡಿ ಸಂತಸ ವ್ಯಕ್ತಪಡಿಸಿದರು ಎಂದಿದ್ದಾರೆ.
BREAKING: ‘BMTC ನಿರ್ವಾಹಕ ಹುದ್ದೆ’ಗಳ ನೇಮಕಾತಿಯ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024