ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದಲ್ಲಿ ಸಿದ್ದರಾಮಯ್ಯ ಪಾತ್ರಕ್ಕೆ ತಮಿಳು ನಟ ವಿಜಯ ಸೇತುಪತಿ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ.

BIGG NEWS : ಫೋರ್ಬ್ಸ್ ಶ್ರೀಮಂತ ಭಾರತೀಯರ ಪಟ್ಟಿ ರಿಲೀಸ್‌: ಅಗ್ರಸ್ಥಾನದಲ್ಲಿ ಗೌತಮ್ ಅದಾನಿ, ಮುಕೇಶ್ ಅಂಬಾನಿ | Forbes 100 Richest Indians

 ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಸಿನಿಮಾದ ಮೂಲಕ ಬಿಚ್ಚಿಡಲು ಸತ್ಯರತ್ನಂ ಸಿದ್ದತೆ ನಡೆಸಿದ್ದಾರೆ.

ಚುನಾವಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಸಿಎಂ ‘ಮ್ಯೂಸಿಕಲ್ ಚೇರ್’ ಆರಂಭ : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ  ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದ್ದು, ಈಗಾಗಲೇ ಸಿದ್ದರಾಮಯ್ಯ ಬೆಂಬಲಿಗರು ವಿಜಯ್ ಸೇತುಪತಿಯನ್ನು ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Share.
Exit mobile version