ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 10 ಮಂದಿ ಸಜೀವ ದಹನವಾಗಿದ್ದು, ನಾಲ್ವರಿಗೆ ಗಂಭೀರ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ತಮಿಳುನಾಡಿ ವಿರುದುನಗರದ ವೆಂಬಕುಟ್ಟೈ ಎಂಬಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ವಿಜಯ್ ಎಂಬುವರಿದೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ.
ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಸ್ಪೋಟದಿಂದ ಕಾರ್ಖಾನೆ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
#WATCH | Explosion occurs in a firecracker manufacturing unit in Tamil Nadu's Virudhunagar; details awaited pic.twitter.com/cALcg6A9Ow
— ANI (@ANI) February 17, 2024