ಚೆನ್ನೈ(ತಮಿಳುನಾಡು): ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ ಶಾಲಾ ವಿದ್ಯಾರ್ಥಿನಿಯರು ಸಾವಿನ ಪ್ರಕರಣಗಳು ದಾಖಲಾಗುತ್ತಿವೆ. ಇದರ ಬೆನ್ನಲ್ಲೇ, ಇದೀಗ ಮತ್ತೊಬ್ಬ ಬಾಲಕಿ ಸಾವಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನಿನ್ನೆ ಶಿವಕಾಶಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಈ ತನಿಖೆ ಪೂರ್ಣಗೊಳ್ಳುವವರೆಗೂ ನಾವು ಏನನ್ನೂ ಹೇಳುವುದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆಕೆ ಆಗಾಗ್ಗೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ವರದಿಯಾದ ಸಾವಿನ ಪ್ರಕರಣಗಳಲ್ಲಿ ಇದು ನಾಲ್ಕನೆಯದಾಗಿದೆ. ಹದಿಹರೆಯದ ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆತ್ಮಹತ್ಯೆಯ ಆಲೋಚನೆಗಳಿಂದ ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ. ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯೆ ಯೋಚನೆ ಮಾಡಬಾರದು. ಇಂತಹ ಕೆಲಸವನ್ನು ಸಾಧನೆಯಾಗಿ ಪರಿವರ್ತಿಸಿ. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರು ತಾಲೂಕು ಬಂದ್ ಗೆ ಕರೆ