ಬೆಂಗಳೂರು : ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿದ್ದಾರೆ. 2024–25ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇದು ಅವರು ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್ ಆಗಿದ್ದು, ರಾಜ್ಯದಲ್ಲಿ ತಲೆದೋರಿರುವ ಭೀಕರ ಬರದ ಬರೆಯ ಮಧ್ಯೆ ವಿತ್ತೀಯ ಶಿಸ್ತಿನ ಪರಿಮಿತಿಯಲ್ಲಿ ವೆಚ್ಚ, ಸಂಪನ್ಮೂಲ ಕ್ರೋಡೀಕರಣದ ಲೆಕ್ಕಾಚಾರಗಳ ಮೇಲಿನ ಕುತೂಹಲ ಹೆಚ್ಚಿಸಿದೆ.
2024–25ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಸಮಾಜ ಕಲ್ಯಾಣ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳ ವಸತಿ ಶಾಲೆಗಳು ಗ್ಯಾರಂಟಿ ಯೋಜನೆಗಳನ್ನು ಜಗತ್ತೇ ಮೆಚ್ಚಿದೆ.ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ 50,000 ರಿಂದ 55,000 ಕೋಟಿ ಮೊತ್ತದ ಗ್ಯಾರಂಟಿ ಯೋಜನೆಗಳ ಲಾಭ ರಾಜ್ಯದ ಜನರಿಗೆ ಲಭಿಸುತ್ತಿದೆ.
ಈ ಯೋಜನೆಗಳನ್ನು ವಿರೋಧ ಪಕ್ಷಗಳು ‘ಬಿಟ್ಟಿ ಭಾಗ್ಯಗಳು’ ಎಂದು ಅಪಹಾಸ್ಯ ಮಾಡಿದ್ದವು. ಆದರೆ, ನಮ್ಮ ಕಲ್ಯಾಣ ಯೋಜನೆಗಳನ್ನು ಇಡೀ ಜಗತ್ತೇ ಮೆಚ್ಚಿದೆ.ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ರೂ. 2,710 ಕೋಟಿ ಅನುದಾನ. ಈ ವರ್ಗದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ತಲಾ 100ಕ್ಕೆ ಏರಿಕೆ.
ಗ್ಯಾರಂಟಿ ಯೋಜನೆಗಳನ್ನು ಜಗತ್ತೇ ಮೆಚ್ಚಿದೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ 50,000 ರಿಂದ 55,000 ಕೋಟಿ ಮೊತ್ತದ ಗ್ಯಾರಂಟಿ ಯೋಜನೆಗಳ ಲಾಭ ರಾಜ್ಯದ ಜನರಿಗೆ ಲಭಿಸುತ್ತಿದೆ. ಈ ಯೋಜನೆಗಳನ್ನು ವಿರೋಧ ಪಕ್ಷಗಳು ‘ಬಿಟ್ಟಿ ಭಾಗ್ಯಗಳು’ ಎಂದು ಅಪಹಾಸ್ಯ ಮಾಡಿದ್ದವು. ಆದರೆ, ನಮ್ಮ ಕಲ್ಯಾಣ ಯೋಜನೆಗಳನ್ನು ಇಡೀ ಜಗತ್ತೇ ಮೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.