ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಸ್ತೀಕ್ ಮೊತ್ತವನ್ನು ರೂ.60,000 ದಿಂದ ರೂ.72,000 ಹೆಚ್ಚಳ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಅರ್ಚಕ ಸಮುದಾಯವು ಧನ್ಯವಾದ ಅರ್ಪಿಸಿದೆ.
ಈ ಮೊದಲು ಕೂಡ ಅಂದರೆ 2013, 2015 ಮತ್ತು 2017 ಹಾಗೂ ಪ್ರಸ್ತುತ 2025 ರಲ್ಲಿ ಒಟ್ಟು 4 ಬಾರಿ ರೂ.48,000 ತಸ್ತೀಕ್ ಮೊತ್ತವನ್ನು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯರವರೇ ಎಂಬುದು ಗಮನಾರ್ಹವಾದ್ದದ್ದು.
ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ, ದುಮ್ಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಮುಜರಾಯಿ ಇಲಾಖೆಯಲ್ಲಿ ಅಭಿವೃದ್ಧಿಯ ಪ್ರವಾಹವೇ ಜರುಗಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಅರ್ಚಕರ ಕಣ್ಮಣಿ, ಕರ್ನಾಟಕದ ಬಂಗಾರದ ಮನುಷ್ಯ ಎಂದು ಅರ್ಚಕ ಸಮೂಹದಿಂದ ಮನೆಮಾತಾಗಿದ್ದಾರೆ. ಮುಜರಾಯಿ ಇಲಾಖೆಯಲ್ಲಿ ಧಾರ್ಮಿಕ ಸ್ನೇಹಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ, ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡು ಇತಿಹಾಸ ಸೃಷ್ಟಿಸಿರುವ ಏಕೈಕ ಮುಜರಾಯಿ ಸಚಿವರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ದಿನೇಶ್ ಗುಂಡೂರಾವ್, ರಾಜ್ಯಾಧ್ಯಕ್ಷರು, ಪ್ರೊ।। ಡಾ॥ ರಾಧಾಕೃಷ್ಣ ಕೆ.ಇ., ಗೌರವ ಪ್ರಧಾನ ಸಲಹೆಗಾರರು, ಡಾ। ಎಸ್.ಆರ್. ಶೇಷಾದ್ರಿ, ಭಟ್ಟರ್, ಗೌರವ ಉಪಾಧ್ಯಕ್ಷರು, ಡಾ॥ ಕೆ.ಎಸ್.ಎನ್. ದೀಕ್ಷಿತ್, ಮುಖ್ಯ ಪ್ರಧಾನ ಕಾರ್ಯದರ್ಶಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ (ರಿ.) ಹಾಗೂ ಶ್ರೀವತ್ಸ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘ(ರಿ)
ರವರು ಹೃದಯತುಂಬಿ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಹಿಯನ್ನು ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಡಾ.ವೆಂಕಟೇಶ್, ಆಯುಕ್ತರು ಮುಜರಾಯಿ ಇಲಾಖೆ ರವರಿಗೂ ಸಂಘದ ಪದಾದಿಕಾರಿಗಳು ಶುಭಕೋರಿದರು.
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಕೇಂದ್ರ ಸಚಿವ HDK
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!