ಗೌರಿಬಿದನೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಖಾಸಗಿ ಶಾಲೆಯಲ್ಲಿ ಥಳಿಸಿದ್ದರ ವಿರುದ್ಧ ಪೋಷಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಸೂಚಿಸಲಾಗಿದೆ.
ನಿನ್ನೆ ಗೌರಿಬಿದನೂರಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿ ಸುಶಾಂತ್ ಗೆ ಶಿಕ್ಷಕರೊಬ್ಬರು ಥಳಿಸಿದಂತ ಆರೋಪ ಕೇಳಿ ಬಂದಿತ್ತು. ಥಳಿತಕ್ಕೆ ಒಳಗಾಗಿದ್ದಂತ ವಿದ್ಯಾರ್ಥಿಯನ್ನು ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಸಿಬ್ಬಂದಿ ಚಿಕಿತ್ಸೆ ಕೊಡಿಸಿದ್ದರು.
ಶಾಲಾ ಶಿಕ್ಷಕ ವಿದ್ಯಾರ್ಥಿಯನ್ನು ಥಳಿಸಿದ್ದ ಬಗ್ಗೆ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದರು. ಸೂಕ್ತ ಕಾನೂನು ಕ್ರಮಕ್ಕೂ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಾಗಿದೆ.
ಶಾಲೆಗೆ ಭೇಟಿ ನೀಡಿ, ಐದು ದಿನಗಳಲ್ಲಿ ವರದಿ ನೀಡುವಂತೆ ಸಂಬಂಧಿಸಿದಂತ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಕ್ಕಳ ರಕ್ಷಣಾ ಆಯೋಗವು ಸೂಚಿಸಿದೆ. ಗೌರಿಬಿದನೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಥಳಿಸಿದ್ದರ ಬಗ್ಗೆ ಸಂಪೂರ್ಣ ವರದಿಯನ್ನು ಐದು ದಿನಗಳಲ್ಲಿ ನೀಡುವಂತೆ ಮಕ್ಕಳ ರಕ್ಷಣಾ ಆಯೋಗವು ಖಡಕ್ ಸೂಚನೆ ನೀಡಿದೆ.
BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ
BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ








