ಹಾವೇರಿ: ಹಾವೇರಿಯಲ್ಲಿ ನಡೆಯುತ್ತಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನಹೊಂದಿದ್ದಾರೆ.
34 ವರ್ಷದ ಸಂಗನಗೌಡ ಶಿಕ್ಷಕರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಿಕ್ಷಕ ಸಂಗನ ಗೌಡ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಮತ್ತಿಕೇರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರು ಹಾವೇರಿಯ ಎಳೆಯರ ಬಳಗ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ.