ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಣ ವೃಂದದ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ನ.30 ರವರೆಗೆ ವಿಸ್ತರಣೆ ಮಾಡಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿದ್ದು, ನಂತರ ಬರುವ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ನವೆಂಬರ್ 18 ರಂದು ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿತ್ತು.
BREAKING NEWS : ದ್ವೇಷ ಭಾಷಣ ಪ್ರಕರಣ ; ಸಮಾಜವಾದಿ ಪಕ್ಷದ ನಾಯಕ ‘ಅಜಂ ಖಾನ್’ಗೆ ಜಾಮೀನು |Hate Speech Case