ಬೆಂಗಳೂರು : ರಾಜ್ಯ ಸರ್ಕಾರದಿಂದ ಕರೆಯಲಾಗಿದ್ದಂತ 15,000 ಶಿಕ್ಷಕರ ಹುದ್ದೆಯ ನೇಮಕಾತಿ ( Teacher Recruitment ) ಸಂಬಂಧ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್ /ಏಪ್ರಿಲ್ ತಿಂಗಳಲ್ಲಿ ಅರ್ಜಿ ಸ್ವೀಕರಿಸಿತ್ತು. ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಸುಮಾರು 1,00683 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು
ಈಗಾಗಲೇ 15,000 ಶಿಕ್ಷಕರ ಹುದ್ದೆಯ ಭರ್ತಿಯ ಬಳಿಕ, ಮತ್ತೆ 2,500 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವರು ತಿಳಿಸಿದ್ದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೂ ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ.
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆhttps://t.co/vaplgMk0bF— B.C Nagesh (@BCNagesh_bjp) September 27, 2022