ಬೆಂಗಳೂರು : 2012-13. 2014-15 ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡ 41 ಮಂದಿ ಶಿಕ್ಷಕರನ್ನು ಬಂಧಿಸಿದ್ದಾರೆ. ಇನ್ನೂ 100 ಕ್ಕೂ ಹೆಚ್ಚು ಶಿಕ್ಷಕರು ಪರಪ್ಪನ ಅಗ್ರಹಾರ ಸೇರಬಹುದು ಎಂದು ಸಿಐಡಿ ಹೇಳುತ್ತಿದೆ.
ಈಗ ಬಂಧಿತರಾಗಿರುವ ಶಿಕ್ಷಕರು ಕಾನೂನುಬಾಹಿರವಾಗಿ ಸರ್ಕಾರಿ ಹುದ್ದೆ ಪಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ ಸರ್ಕಾರಕ್ಕೆ ಆರೋಪಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಶಿಫಾರಸು ಮಾಡಲಾಗಿದ್ದು, ಅದರನ್ವಯ ಶಿಕ್ಷಕರನ್ನು ಸೇವೆಯಿಂದಲೇ ವಜಾಗೊಳಿಸಲು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
2012-13 ಹಾಗೂ 2014-15ನೇ ಸಾಲಿನಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಿಧಾನಸೌಧ ಹಾಗೂ ಹಲಸೂರುಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಮೂರು ಎಫ್ಐಆರ್ ದಾಖಲಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಎಫ್ಐಆರ್ಗಳ ದಾಖಲಾಗಲಿವೆ. ಬಂಧಿತ ಶಿಕ್ಷಕರ ಸಂಖ್ಯೆ ಕೂಡ ಹೆಚ್ಚಾಗಲಿದೆ. ಈವರೆಗೆ 41 ಶಿಕ್ಷಕರು, 7 ಮಂದಿ ಜಂಟಿ ನಿರ್ದೇಶಕರು ಹಾಗೂ ಇಬ್ಬರು ನೌಕರರು ಬಂಧಿತರಾಗಿದ್ದಾರೆ.
ಶಿಕ್ಷಕರ ನೇಮಕಾತಿಯಲ್ಲಿ ನಗದು ರೂಪದಲ್ಲಿ ಹಣದ ವ್ಯವಹಾರ ನಡೆದಿದೆ. ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ನಡೆದಿಲ್ಲಎಂಬ ಮಾಹಿತಿ ಲಭ್ಯವಾಗಿದೆ.ಇನ್ನೂ. ಸಿಐಡಿ ಪೊಲೀಸರ ನಿರೀಕ್ಷೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದ್ದು, ನಮಗೆ ಗೊತ್ತಿತ್ತು ಸರ್, ನೀವು ಬಂದೇ ಬರುತ್ತೀರಾ ಅಂತ. ಹಾಗಾಗಿ ಅಷ್ಟರಲ್ಲಿ ಸಿಲೆಬಸ್ ಮುಗಿಸಿ ಬಿಡೋಣ ಅಂತ ಪಾಠ ಮಾಡುತ್ತಿದ್ದೇವು ಎಂದು ಸಿಐಡಿ ತಂಡಕ್ಕೆ ಶಿಕ್ಷಕರು ಹೇಳಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ನೀಡಿದ ವರದಿ ಆಧರಿಸಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕೆ.ವಿ.ಶರತ್ಚಂದ್ರ ಮಾರ್ಗದರ್ಶನದಲ್ಲಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ 18 ಡಿವೈಎಸ್ಪಿಗಳು ಹಾಗೂ 14 ಇನ್ಸ್ಪೆಕ್ಟರ್ಗಳು ಏಕಕಾಲಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.. ಶಿಕ್ಷಕರ ನೇಮಕಾತಿ((Recruitment of teachers) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ(ಅIಆ)ಅಧಿಕಾರಿಗಳು ವಿವಿಧ ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾದವರನ್ನು ಬಲೆಗೆ ಬೀಳಿಸುತ್ತಿದ್ದಾರೆ.
ಬೆಂಗಳೂರಿಗರಿಗೆ ‘ಮುಖ್ಯ ಮಾಹಿತಿ’ : ‘ಪಟಾಕಿ’ ಅವಘಡ ಸಂಭವಿಸಿದ್ರೆ ತುರ್ತು ಚಿಕಿತ್ಸೆಗಾಗಿ ಈ ಸಹಾಯವಾಣಿ ಸಂಪರ್ಕಿಸಿ
BIG UPDATE: ‘WhatsApp ಡೌನ್’ ಸಮಸ್ಯೆ ಕ್ಲಿಯರ್: ಈಗ ಎಲ್ಲವೂ ಈ ಮೊದಲಿನಂತೆ ‘ಕಾರ್ಯನಿರ್ವಹಣೆ’