ಬೆಂಗಳೂರು: ರಾಜ್ಯ ಸರ್ಕಾರದಿಂದ ಗುಡ್ ಪ್ರೈಡೇ, ಹೋಲಿ ಸಾಟರ್ಡೇ ಮತ್ತು ಈಸ್ಟರ್ ಸಂಡೇ ದಿನಗಳಂದು ಮೌಲ್ಯಮಾಪನ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ ನೀಡಿ ಆದೇಶಿಸಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 15-04-2025ರಿಂದ ರಾಜ್ಯಾಧ್ಯಂತ ಪ್ರಾರಂಭಿಸಲಾಗಿದೆ ಎಂದಿದ್ದಾರೆ.
ದಿನಾಂಕ 18-04-25ರಂದು ಗುಡ್ ಪ್ರೈಡೇ, ದಿನಾಂಕ 19-04-2025ರಂದು ಹೋಲಿ ಸಾಟರ್ಡೆ ಮತ್ತು ದಿನಾಂಕ 20-04-2025ರಂದು ಈಸ್ಟರ್ ಸಂಡೇ ಇರುವುದರಿಂದ ಸದರಿ ದಿನಗಳಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ಕೋರುವ ಶಿಕ್ಷಕರಿಗೆ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ನೀಡಲು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಹಿಗ್ಗಾಮುಗ್ಗಾ ವಾಗ್ಧಾಳಿ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!