ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಲಿರುವಂತ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಮತದಾನಕ್ಕಾಗಿ ಅರ್ಹ ಶಿಕ್ಷಕರು, ಪದವೀಧರರು ನೋಂದಾಯಿಸಿಕೊಳ್ಳೋದಕ್ಕೆ ಮೇ.6ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2024ಕ್ಕೆ  ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳಲು ಮೇ.6, 2024 ಕೊನೆಯ ದಿನವಾಗಿದೆ ಎಂದಿದೆ.

ಅರ್ಹ ಶಿಕ್ಷಕರು ಹಾಗೂ ಪದವೀಧರರು 2 ಸೆಟ್ ಅಗತ್ಯ ದಾಖಲೆಗಳನ್ನು ಸಮೀಪದ ಚುನಾವಣಾ ನೋಂದಣಾಧಿಕಾರಿಗಳಿಗೆ ಮೇ.6ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.

ಆದ್ದರಿಂದ ಎಲ್ಲಾ ಶಿಕ್ಷಕರು ಮತ್ತು ಪದವೀಧರರ ಗಮನಿಸಬೇಕಾದದ್ದು, ಮತದಾರರ ನೋಂದಣಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವು ಮೇ 6, 2024 ಆಗಿದೆ. ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.

ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ : ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ : ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

Share.
Exit mobile version