ಶಿರಸಿ : ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
BIGG BREAKING NEWS : ದೇಶದಲ್ಲಿ ಮತ್ತೆ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,038 ಕೇಸ್ ಪತ್ತೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
BREAKING NEWS : ವಂಚನೆ ಪ್ರಕರಣ : ಬೆಂಗಳೂರಿನಲ್ಲಿ ನಟ, ನಿರ್ಮಾಪಕ `ವೀರೇಂದ್ರ ಬಾಬು’ ಅರೆಸ್ಟ್
ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.
Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ