Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ
KARNATAKA

ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ ತಿಳಿಸಿದರು.

ಇಂದು ಶಿವಮೊಗ್ಗದ ಸಾಗರದ ನಗರದಲ್ಲಿ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಮಹಾಸಭೆ ಮತ್ತು ಶೈಕ್ಷಣಿಕ ಕರ‍್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಸಂಘಗಳು ಉತ್ತಮವಾಗಿ ಕೆಲಸ ಮಾಡಿದೆ. ಸಾಗರ ತಾಲ್ಲೂಕಿನಲ್ಲಿ ಹಾಲಿ ಅಧ್ಯಕ್ಷ ಮಾಲತೇಶಪ್ಪ ಅವರ ನೇತೃತ್ವದಲ್ಲಿ ಸಂಘವು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಉತ್ತಮ ಕೆಲಸ ಮಾಡಿದ ಅಧ್ಯಕ್ಷರನ್ನು, ಸಂಘವನ್ನು ಅಭಿನಂದಿಸುವುದು ಎಲ್ಲರ ಕರ್ತವ್ಯ. ಸಂಘಟನೆ ಪ್ರಾರಂಭವಾಗಿ 55 ವರ್ಷವಾಗಿದ್ದು, ರಾಜ್ಯದಲ್ಲಿ ಶಿಕ್ಷಕರ ಸಂಘವು ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಲಕಾಲಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಕುರಿತು ಇಂತಹ ಕರ‍್ಯಾಗಾರಗಳ ಮೂಲಕ ಚಿಂತನ ಮಂಥನ ಅಗತ್ಯ ಎಂದು ಹೇಳಿದರು.

ಹಿರಿಯ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ತಾಲ್ಲೂಕಿನಲ್ಲಿ ಶಿಕ್ಷಕ ಸಮೂಹ ಉತ್ತಮ ಕೆಲಸ ಮಾಡುತ್ತಿದೆ. ಮರ‍್ನಾಲ್ಕು ಜನ ಶಿಕ್ಷಕರು ಮಾಡುವ ಲೋಪದಿಂದ ಬಹುದೊಡ್ಡ ಶಿಕ್ಷಕ ಸಮೂಹ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ಕೆಲವು ಕಡೆಗಳಲ್ಲಿ ಶಿಕ್ಷಕರು ಕುಡಿದು ಶಾಲೆಗೆ ಬರುತ್ತಾರೆ ಎನ್ನುವ ದೂರುಗಳಿವೆ. ಇಂತಹ ಸಂದರ್ಭದಲ್ಲಿ ಶಿಕ್ಷಕರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ. ಪೋಷಕರು, ಸಮಾಜ ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆ ಇರಿಸಿ ಕೊಂಡಿದೆ. ಅದನ್ನು ನಿಜಗೊಳಿಸಲು ನಿಮ್ಮ ಪ್ರಯತ್ನ ಸದಾ ಇರಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮಾಲತೇಶ್, ತಾಲ್ಲೂಕಿನಲ್ಲಿ ಶಿಕ್ಷಕ ಸಮೂಹ ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ದಿಗೆ ಅರ್ಹನಿಶಿ ದುಡಿಯುತ್ತಿದೆ. ನಾನು ಅಧಿಕಾರ ವಹಿಸಿಕೊಂಡ ನಂತರ ಶಿಕ್ಷಕರ ಸಮಸ್ಯೆಗೆ ಪೂರಕವಾಗಿ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಸದ್ಗುರು ಟೀರ‍್ಸ್ ಕಾರ್ನರ್ ಮೂಲಕ ಶಿಕ್ಷಕರಿಗೆ ಅನೇಕ ಶೈಕ್ಷಣಿಕ ಮಾಹಿತಿ ನೀಡಲಾಗುತ್ತಿದೆ. ಶಿಕ್ಷಕರಿಗೆ ಬೇಕಾದ ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸಲಾಗುತ್ತಿದೆ. ಶಿಕ್ಷಕರಿಗೆ ಸಮಸ್ಯೆ ಬಂದಾಗ ಸಂಘವು ಹೋರಾಟದಿಂದ ಹಿಂದೆ ಸರಿದಿಲ್ಲ. ಶಿಕ್ಷಕರ ಎಲ್ಲ ಬೇಡಿಕೆಗಳಿಗೆ ಕ್ಷೇತ್ರದ ಶಾಸಕರು ಸ್ಪಂದಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಕ್ಷಕ ಸ್ನೇಹಿ ಕಾರ್ಯಕ್ರಮಗಳನ್ನು ಸಂಘವು ಹಂತಹAತವಾಗಿ ನಡೆಸಿಕೊಂಡು ಬರುತ್ತದೆ ಎಂದು ತಿಳಿಸಿದರು.

ಶಿಕ್ಷಕರಲ್ಲಿ ಆರ್ಥಿಕ ನಿರ್ವಹಣೆ ಕುರಿತು ಶಂಕರ್ ಶಿಕಾರಿಪುರ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಡಾ. ಅನ್ನಪೂರ್ಣ, ಭೂಮೇಶ್, ಜಗನ್ನಾಥ್ ಕೆ., ದೇವೇಂದ್ರಪ್ಪ, ಪೃಥ್ವಿ ಭದ್ರಾವತಿ, ಗಣಪತಿ ಸೊರಬ, ಮಂಜುನಾಥ, ಭೂಕೇಶ್ವರಪ್ಪ, ಕವಿರಾಜ್, ವಿಕ್ಟೋರಿಯಾ ಫರ್ನಾಂಡಿಸ್, ಗವಿಯಪ್ಪ ಎಲ್.ಟಿ., ಹೂವಪ್ಪ, ಮೂರ್ತಿ ಎಂ.ವೈ. ಇನ್ನಿತರರು ಹಾಜರಿದ್ದರು. ದಿನೇಶ್ ಎನ್.ಕೆ. ಸ್ವಾಗತಿಸಿದರು. ಮನೋಹರ ಟಿ.ವಿ. ವಂದಿಸಿದರು. ಶಂಕರ್ ಜಿ.ಕೆ. ನಿರೂಪಿಸಿದರು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರಿಗೆ, ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು.

ಬೆಂಗಳೂರಿನ ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

BREAKING : ದೆಹಲಿಯಲ್ಲಿ ಉಗ್ರ ದಾಳಿಗೆ ‘LeT’ ಸಂಚು ; ಪಂಜಾಬ್-ಕಾಶ್ಮೀರದಲ್ಲಿ 2 ಐಇಡಿಗಳು ಪತ್ತೆ!

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.