ಬೆಂಗಳೂರು: ನಿನ್ನಯ ಶುಕ್ರವಾರದಂದು ವಿಧಾನಸೌಧಕ್ಕೆ ಬಾಂಬ್ ಇರಿಸಲಾಗಿದೆ ಎಂಬುದಾಗಿ ವ್ಯಕ್ತಿಯೊಬ್ಬರು ಕರೆ ಮಾಡಿ ತಿಳಿಸಿದ್ದರು. ಇದರಿಂದ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ಸ್ಥಳಕ್ಕೆ ಆಗಮಿಸಿದಂತ ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಕರೆ ಎಂಬುದಾಗಿ ತಿಳಿದು ಬಂದಿತ್ತು. ಈ ಪ್ರಕರಣ ಸಂಬಂಧ ಸಾಫ್ಟ್ ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಕಚೇರಿಗೆ ಶುಕ್ರವಾರದಂದು ಕರೆ ಮಾಡಿದ್ದಂತ ವ್ಯಕ್ತಿಯೊಬ್ಬ, ವಿಧಾನಸೌಧಕ್ಕೆ ಬಾಂಬ್ ಇರಿಸಲಾಗಿದೆ. ಅದು ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬುದಾಗಿ ಹೇಳಿದ್ದನು. ಈ ಬಗ್ಗೆ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿಬಾಂಬ್ ಕರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು, ತನಿಖೆಗೆ ಇಳಿದಿದ್ದರು.
ಇದೀಗ ಪೊಲೀಸರು ಹೆಬ್ಬಗೋಡಿಯ ನಿವಾಸಿ 41 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಬಾಂಬ್ ಬೆದರಿಕೆ ಕರೆ ಮಾಡಿರೋ ಹಿನ್ನಲೆಯಲ್ಲಿ ಬಂಧಿಸಲಾಗಿದೆ. ಯಾವ ಕಾರಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.