ಆಲಮಟ್ಟಿ : “ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ”ಎಂದು ತಿಳಿಸಿದರು.
ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು ಮಾಡಬಹುದು ಎಂದು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ” ಎಂದು ಹೇಳಿದರು.
“ಕೃಷ್ಣ ನದಿ ನೀರಿನ ಬಳಕೆ ಬಗ್ಗೆ ಪ್ರಶ್ನೆ ಕೇಳಿದಾಗ “ನಮ್ಮ ರಾಜ್ಯದ ಪಾಲಿನ ಒಂದು ಹನಿ ನೀರನ್ನು ಸಹ ರೈತರ ಹಿತ ಕಾಪಾಡಲು ಬಳಕೆ ಮಾಡಲಾಗುವುದು. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೆ ನೀಡಿ” ಎಂದರು.
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್