ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಅದೇ ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲ ಮಾಡಿಕೊಡಲಾಗಿದೆ.
ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದೆ.
ಇದೀಗ ಇ-ಸ್ವರಾಜ್ ತಂತ್ರಾಂಶದಲ್ಲಿ ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
BREAKING: ಮನಮೋಹನ್ ಸಿಂಗ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ