ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿ.ಎಲ್.ಎಲ್ ಪ್ರಯೋಗಾಲಯಕ್ಕೆ ಅವಶ್ಯವಿರುವ ಟೆಕ್ನಿಕಲ್ ಆಫೀಸರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ದಿನಾಂಕ: 05.01.2023 ರಂದು ನೇರ ನೇಮಕಾತಿಯನ್ನು, ಏರ್ಪಡಿಸಲಾಗಿದ್ದು, ಈ ನೇರ ಸಂದರ್ಶನವನ್ನು ಆಡಳಿತಾತ್ಮಕ ಕಾರಣಗಳಿಂದ ದಿನಾಂಕ: 06.01.2023 ರಂದು 3.00 ಗಂಟೆಗೆ ಮುಂದೂಡಲಾಗಿದೆ ಎಂದು ನಿರ್ದೇಶಕರು, ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಇವರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಪುಸ್ತಕ ಆಹ್ವಾನ
2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ದಿನಾಂಕ: 31-01-2023 ರೊಳಗೆ ಕಾಪಿರೈಟ್ ಮಾಡಿಸಿರತಕ್ಕದ್ದು. ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು(ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ದಿ: 31-01-2023 ರ ಒಳಗೆ ಸಲ್ಲಿಸುವುದು.
ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಕುರಿತಾದ ಮಾಹಿತಿಯನ್ನು ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 080-22864990, 22867358 ನ್ನು ಸಂಪರ್ಕಿಸಬಹುದೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.