ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ: ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಇಂದು ಸಂಭವಿಸಬಹುದಾಗಿದ್ದ ದೊಡ್ಡ ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಖನೌನ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಉಪಮುಖ್ಯಮಂತ್ರಿ ಮೌರ್ಯ ಅವರು ಲಖನೌನ ಲಾ ಮಾರ್ಟ್ಸ್ (La Marts) ಮೈದಾನದಿಂದ ಕೌಶಂಬಿಗೆ ಪ್ರಯಾಣ ಬೆಳೆಸಿದ್ದರು. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅದರ ಕ್ಯಾಬಿನ್‌ನಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡಿದೆ. … Continue reading ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ: ಲಕ್ನೋದಲ್ಲಿ ತುರ್ತು ಭೂಸ್ಪರ್ಶ