ಬೆಂಗಳೂರು: ನಗರದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೂ, ಈ ಕಾರಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಐಟಿಪಿಎಲ್ ನಡುವೆ 08.25 ಗಂಟೆಯಿಂದ 8.55 ಗಂಟೆಯವರೆಗೆ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದಿದೆ.
ನೇರಳೆ ಮಾರ್ಗದಲ್ಲಿ ಈ ಸಮಯದಲ್ಲಿ ಚಲ್ಲಘಟ್ಟದಿಂದ ಐಟಿಪಿಎಲ್ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್ ರೈಲು ಸೇವೆಗಳು ನಡೆಸಲಾಯಿತು. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದಿದೆ.
8.55 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ಎಂದಿನಂತೆ ನಡೆಯುತ್ತಿವೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಾಯವಾಗಿಲ್ಲ ಎಂಬುದಾಗಿ ಹೇಳಿದೆ.
ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ