ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪವರ್ ಕಟ್ ಸಮಸ್ಯೆಯಿಂದಾಗಿ ಹಸಿರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಆ ಬಳಿಕ 10 ನಿಮಿಷಗಳಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸಿದ ಕಾರಣ, ಈಗ ರೈಲು ಸಂಚಾರ ಪುನಾರಾರಂಭಗೊಂಡಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಶ್ರೀರಾಂಪುರ ನಿಲ್ದಾಣಗಳ ನಡುವೆ ರೈಲುಗಳು ಸಂಜೆ 4.11 ರಿಂದ 4.23 ಗಂಟೆಯವರೆಗೆ ವಿದ್ಯುತ್ ವೈಫಲ್ಯದಿಂದಾಗಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಅವಧಿಯಲ್ಲಿ ಶಾರ್ಟ್ ಲೂಪ್ ಸೇವೆಗಳನ್ನು ನಡೆಸಲಾಯಿತು ಎಂದು ತಿಳಿಸಿದೆ.
ನಾಗಸಂದ್ರ ಮತ್ತು ರಾಜಾಜಿನಗರ ನಡುವೆ ನ್ಯಾಷನಲ್ ಕಾಲೇಜು ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ನಿಲ್ದಾಣಗಳ ನಡುವೆ 4.23 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ನಡೆಯುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತಿರುವುದಾಗಿ ಬಿ.ಎಂ.ಆರ್.ಸಿ.ಎಲ್ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು
ಉಕ್ರೇನ್ ಗೆ ನಾಲ್ಕು ‘ಭೀಷ್ಮ್ ಕ್ಯೂಬ್’ ಗಳನ್ನು ಉಡುಗೊರೆಯಾಗಿ ನೀಡಿದ ಭಾರತ | BHISHM Cubes