ಸುಭಾಷಿತ :

Sunday, January 26 , 2020 4:20 AM

ಬೆಂ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಅಂತರದಿಂದ ಇನ್ನೂ ಹೆಚ್ಚಿನ ಅಂತರದಿಂದ ಗೆಲುವು: ಆರ್ ಅಶೋಕ


Sunday, March 17th, 2019 6:27 pm

ಬೆಂಗಳೂರು : ಜಾತಿ ಸಮೀಕರಣದಲ್ಲಿ ಸಿದ್ದ ಹಸ್ತರಾಗಿದ್ದ ಅನಂತಕುಮಾರ್ ಇಲ್ಲದ ಮೊದಲ ಚುನಾವಣೆ ಎದುರಿಸುತ್ತಿದ್ದೇವೆ. ಈ ಬಾರಿಯ ಚುನಾವಣೆ ತುಂಬಾ ಪ್ರಾಮುಖ್ಯತೆ ಪಡೆದಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಕ್ಕೂ ಹೆಚ್ಚು ಸ್ಥಾನ ಪಡೆಯಲಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯ ಯಶಸ್ಸಿಗಾಗಿ ತೇಜಸ್ವಿನಿ ಅನಂತ ಕುಮಾರ್ ಇಂದು ಸುತ್ತೂರು ಶ್ರೀ ಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಉಪ ಮುಖ್ಯಮಂತ್ರಿ ಆರ್ ಅಶೋಕ್ ಮಾತನಾಡಿ, ಚುನಾವಣಾ ತಯಾರಿ ತುಂಬಾ ಚೆನ್ನಾಗಿದೆ. ಈ ಬಾರಿಯ ಚುನಾವಣೆ ದೇಶಕ್ಕೆ ಅಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆದಿರುವಂತಹದ್ದು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವ ಆಶಯ ನಮ್ಮದು. ಅನಂತಕುಮಾರ್ ಅವರು ಪ್ರತಿ ಬಾರಿ ಚುನಾವಣಾ ಸಂಧರ್ಭದಲ್ಲಿ ಗುರು ಹಿರಿಯರನ್ನು ಭೇಟಿ ಆಗಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದರು. ಇದೆ ಪರಂಪರೆಯ ನ್ನು ನಾವು ಮುಂದುವರೆಸಿದ್ದೇವೆ. ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಅನಂತರದಿಂದ ಗೆಲುವು ಸಾಧಿಸಲಿದ್ದೇವೆ ಎಂದರು.

ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ನಂತರ ಮಾತನಾಡಿದ ತೇಜಸ್ವಿನಿ ಅನಂತ ಕುಮಾರ್, ಸುತ್ತೂರು ಶ್ರೀಗಳು ಜೊತೆಯಲ್ಲಿ ಅನಂತ ಕುಮಾರ್ ಅವರು ಉತ್ತಮ ಭಾಂಧವ್ಯ ಹೊಂದಿದ್ದರು. ನನ್ನ ಮಕ್ಕಳು ಕೂಡಾ ಜೆ ಎಸ್ ಎಸ್ ವಿದ್ಯಾಸಂಸ್ಥೆ ಗಳಲ್ಲಿ ವಿಧ್ಯಾಭ್ಯಾಸ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೆಲವು ಸಾಧಿಸಲು ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದರು.

ತ್ಯಾಗರಾಜ ನಗರದ ಸುತ್ತೂರು ಸದನದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಶಾಸಕ ವಿ ಸೋಮಣ್ಣ ಸಾಥ್ ನೀಡಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions