ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಪ್ರಖರತೆ ಹೆಚ್ಚಾಗಿದೆ. ಕರ್ನಾಟಕ ದಿನೇ ದಿನೇ ಕುದಿಯಲಾರಂಭಿಸಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯದ ಶೇ.75ರಷ್ಟು ಭೌಗೋಳಿಕ ಪ್ರದೇಶಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ನಿಂದ 42.8 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಬಿಸಿಗಾಳಿ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರಗೊಂಡಿದೆ.
ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರಿನಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ.
ರಾಜ್ಯದ ಅತೀ ಹೆಚ್ಚು ಮಳೆ ಬೀಳುವ ಆಗುಂಬೆಯಲ್ಲೂ ಈ ಬಾರಿ ಗರಿಷ್ಠ ತಾಪಮಾನ ದಾಖಲಾಗಿದೆ. ಭಾರತದ ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯೂ ಒಂದು. ಪಶ್ಚಿಮ ಘಟ್ಟದ ಸಹ್ಯಾದ್ರಿ ತಪ್ಪಲಿನಲ್ಲಿರುವ ಆಗುಂಬೆ ಸದಾ ಹಸಿರಿನಿಂದ ಕೂಡಿರುತ್ತದೆ. ಆದರೇ ಈಗ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!