ಬೆಂಗಳೂರು: ರಾಜ್ಯದಲ್ಲಿ ಇಂದು ಬಿಸಿಲಿನ ತಾಪ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ದಾಖಲೆಯ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಅದರಲ್ಲಿ ಬಳ್ಳಾರಿ ಸೇರಿದಂತೆ ಆರು ಜಿಲ್ಲೆಗಳಲ್ಲಿ 45 ಡಿಗ್ರಿ ದಾಖಲಾಗುವ ಮೂಲಕ, ಅತಿಹೆಚ್ಚು ತಾಪಾಮಾನ ದಾಖಲಾಗಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹೊರತು ಪಡಿಸಿ, ಇಂದು ಉಳಿದ ಎಲ್ಲಾ ಜಿಲ್ಲೆಯಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಬಳ್ಳಾರಿ, ಕೊಪ್ಪಳ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಇಂದು ದಾಖಲೆಯ ತಾಪಮಾನ ಎನ್ನುವಂತೆ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಜನರು ಮೇ.5ರವರೆಗೆ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ ಎಚ್ಚರಿಕೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗೆ ಗುರುವಾರ ‘ರೆಡ್ ಅಲರ್ಟ್’ ಘೋಷಿಸಿದ್ದು, ಈ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ನೀಡಲಾಗಿದೆ. ಜನರು ಬಿಸಿಯ ಶಾಖದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ.
‘ಸಿಂಬಲ್ ಲೋಡಿಂಗ್ ಯೂನಿಟ್’ ಸಂಗ್ರಹ, ನಿರ್ವಹಣೆಗೆ ಹೊಸ ‘ಪ್ರೊಟೋಕಾಲ್’ ಹೊರಡಿಸಿದ ಚುನಾವಣಾ ಆಯೋಗ
ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ