ಮೈಸೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುವುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದೆ.
ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ.
ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತದೆ.
ಈ ನಿಲುಗಡೆಗಳು 24 ಆಗಸ್ಟ್ 2025ರಿಂದ 23 ಫೆಬ್ರವರಿ 2026ರವರೆಗೆ ಆರು ತಿಂಗಳ ಕಾಲ, ಈಗಿರುವ ಸಮಯಗಳಲ್ಲೇ ಜಾರಿಯಲ್ಲಿ ಇರುತ್ತವೆ.
ಈ ನಿಲುಗಡೆಯ ಮುಂದುವರಿಕೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಉತ್ತಮ ಸಂಪರ್ಕ ಹಾಗೂ ಅನುಕೂಲ ಕಲ್ಪಿಸುತ್ತದೆ.