ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಉದ್ಯಮಿ ವಿಜಯ್ ಟಾಟಾಗೆ 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾದಂತ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.12ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಬೆದರಿಕೆ ಪ್ರಕರಣದಲ್ಲಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೆ ಪ್ರಕರಣಕ್ಕೆ ನೀಡಿದ್ದಂತ ಮಧ್ಯಂತರ ಆದೇಶವನ್ನು ವಿಸ್ತರಿಸಿ ಆದೇಶಿ, ವಿಚಾರಣೆ ಮುಂದೂಡಿತು. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ.
ಅಂದಹಾಗೇ ಉದ್ಯಮಿ ವಿಜಯ್ ಟಾಟಾ ಅವರು ನೀಡಿದ್ದಂತ ದೂರು ಆಧರಿಸಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ಎಂ ರಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.