ಬೆಂಗಳೂರು: ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿಗೆ ರಾಜ್ಯ ಸರ್ಕಾರ ತಡೆ ನೀಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಸಿಇಓಗಳಿಗೆ ಪತ್ರ ಬರೆದಿದ್ದು, ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯವರು ಭೇಟಿ ಮಾಡಿ, ಜಿಲ್ಲಾ ಪಂಚಾಯ್ತಿಗಳಲ್ಲಿ ವಿವಿಧ ರೀತಿಯಲ್ಲಿ ನೇಮಕಾತಿ ಆದೇಶಗಳನ್ನು ಹೊರಡಿಸುತ್ತಿರುವುದರಿಂದ, ಅರ್ಹ ನೌಕರರಿಗೆ ಅನ್ಯಾಯವಾಗುವುದರಿಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಭಿಪ್ರಾಯ ಬರುವವರೆಗೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡುವುದನ್ನು ತಡೆಹಿಡಿಯುವಂತೆ ಗಮನಕ್ಕೆ ತಂದಿರುತ್ತಾರೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡುವ ಬಗ್ಗೆ ಏಕರೂಪವಾಗಿ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ, ಈಗಾಗಲೇ ನೇಮಕಾತಿ ಮಾಡಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಇನ್ನುಳಿದ ಜಿಲ್ಲೆಗಳಲ್ಲಿ ಸೇವೆಯೊಳಗೆ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡುಯುವಂತೆ ನಿರ್ದೇಶಿಸಿದ್ದಾರೆ.