ಬೆಂಗಳೂರು: ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದ್ರೇ ಇದೀಗ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಅಂತ ಅವರು ಹೇಳಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಾಲಗಿದೆ. ಅದರಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು.
— Siddaramaiah (@siddaramaiah) July 17, 2024
BREAKING: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಎನ್ಕೌಂಟರ್: 12 ನಕ್ಸಲರ ಹತ್ಯೆ | Encounter In Maharashtra
BIG NEWS : 2026 ನೇ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ʻCBSEʼ ಬೋರ್ಡ್ ಪರೀಕ್ಷೆ ಜಾರಿ : ʻNCFSEʼ ಶಿಫಾರಸು