ಬೆಂಗಳೂರು : ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ.
ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ( C.M Basavaraj Bommai ) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿದ್ದರು.
ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, , ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ.