ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಇಂದು ಸಂಜೆ 5.30ಕ್ಕೆ ಮಹತ್ವದ ಸುದ್ದಿಗೋಷ್ಠಿಯಲ್ಲಿ ಸೇನಾ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ನೀಡಲಿದೆ.
ಇಂದು ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವಲಾಯ ಉನ್ನತ ಅಧಿಕಾರಿಗಳು ಈ ಸುದ್ದಿಗೋಷ್ಠಿಯನ್ನು ನಡೆಸಲಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಕುರಿತಂತೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಇದಷ್ಟೇ ಅಲ್ಲದೇ ನಿನ್ನೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದಂತ ಡ್ರೋನ್ ಹಾಗೂ ಕ್ಷಿಪಣಿ ದಾಳಿಯ ಹಾನಿ, ಪ್ರತ್ಯುತ್ತರದ ದಾಳಿಯ ಬಗ್ಗೆಯೂ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಲಿದ್ದಾರೆ.
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ
BREAKING: ಭಾರತೀಯ ಸೇನಾ ಕಾರ್ಯಾಚರಣೆ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ