ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಂತ್ರ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಔಷಧಿ ದಾಸ್ತಾನು ಸೇರಿದಂತೆ ಇತರೆ ಮಾಹಿತಿಯನ್ನು ಪಡೆದಿದ್ದರು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯ ಎಲ್ಲಾ ನೌಕರರ ಎಲ್ಲಾ ರಜೆಯನ್ನು ರದ್ದುಗೊಳಿಸಿ ಆದೇಶಿಸಿದೆ.
ಮುಂಬರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ವೈದ್ಯಕೀಯ ಕಾರಣಗಳನ್ನು ಹೊರತುಪಡಿಸಿ ಯಾವುದೇ ಅಧಿಕಾರಿಗೆ ಸ್ಟೇಷನ್ ರಜೆ ಸೇರಿದಂತೆ ಯಾವುದೇ ರೀತಿಯ ರಜೆಯನ್ನು ನೀಡಬಾರದು ಎಂಬುದಾಗಿ ಆದೇಶ ಮಾಡಿದೆ.
ಇದಲ್ಲದೆ, ಈಗಾಗಲೇ ಮಂಜೂರಾದ ರಜೆಯನ್ನು ರದ್ದುಪಡಿಸಲಾಗಿದೆ ಮತ್ತು ರಜೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣ ತಮ್ಮ ಕರ್ತವ್ಯಕ್ಕೆ ಮರಳುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಆದೇಶದಲ್ಲಿ ನಿರ್ದೇಶಿಸಲಾಗಿದೆ.
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ
BREAKING: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ: IPL ಪಂದ್ಯಾವಳಿ ಒಂದು ವಾರ ಮುಂದೂಡಿಕೆ | IPL Match 2025