ಬೆಂಗಳೂರು: ನಗರದಲ್ಲಿ ಗೂಡ್ಸ್ ವಾಹನವೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ತೋಟದ ರಸ್ತೆಯ ಸಣ್ಣಾಕ್ಕಿ ಬೈಲಿನಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾಗಿ ಶಶಾಂಕ್(12) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವೇಗವಾಗಿ ಬಂದು ಸೈಕಲ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಾಲಕ ಸಾವನ್ನಪ್ಪುತ್ತಿದ್ದಂತೆ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಜಪಾನ್ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್
BIG NEWS : ದಸರಾ ಉದ್ಘಾಟನೆ, ಮುಲ್ಲಾಗಳ ಪ್ರಕಾರ ನಡೆಯುತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ