ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಈ ಒಂದು ಅಪಘಾತ ಸಮವಿಸಿದೆ.
ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದು ಬೈಕ್ ಅಡಿಕೆ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಬೈಕ್ ಸವಾರ ರವಿಕುಮಾರ್ ಸಾವನಪ್ಪಿದ್ದಾನೆ. ಮೃತ ರವಿಕುಮಾರ್ ಕೆ ಪಿ ಅಗ್ರಹಾರ ನಿವಾಸಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.








