ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದಿದೆ.
ಗೂಡ್ಸ ವಾಹನ ದಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಓರ್ವ ಮಹಿಳೆ ಹಾಗೂ ಪುರುಷ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








