ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದ ಸಮೀಪ ನಡೆದಿದೆ. ನಯಾಜ್ ಖಾನ್ ಕಾರು ಅಪಘಾತದಲ್ಲಿ ಮೃತ ಚಾಲಕ ಎಂದು ತಿಳಿದುಬಂದಿದೆ.
Lಚನ್ನಗಿರಿ ತಾಲೂಕಿನ ನಲ್ಲೂರಿನಿಂದ ಅಡಿಕೆ ವ್ಯಾಪರಕ್ಕೆಂದು ತೆರಳುತ್ತಿದ್ದ ಒಂದು ಕಾರಿಗೆ ಪಾಂಡೋಮಟ್ಟಿ ಕಡೆಯಿಂದ ಚನ್ನಗಿರಿಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರೊಂದು ಎರಡು ತುಂಡಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.








