ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರು ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಪರಿಣಾಮ ಕಾರಲ್ಲಿದ್ದ ಐದು ಜನ ಯುವಕರು ಗಾಯಗೊಂಡಿದ್ದಾರೆ.
ಅತೀ ವೇಗದಲ್ಲಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಾಂಪೌಂಡ್ ಹಾರಿ ಮನೆಗೆ ಕಾರು ಗುದ್ದಿದೆ. ಪರಿಣಾಮ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಘಟನೆ ಬಳಿಕ ಸ್ಥಳೀಯರು ಆಗಮಿಸಿ, ಗಾಯಾಳುಗಳನ್ನು ರಕ್ಷಿಸಿದ್ದಾರೆ.








