ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರ ಆಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಓವರ್ ಟೆಕ್ ಮಾಡಲು ಹೋಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಪಘಾತದಲ್ಲಿ ಮೃತಪಟ್ಟವರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.








