ಕೋಲಾರ : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೂಸಂದ್ರ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ನಾಗರಾಜು (22) ಹಾಗೂ ಶೇಖರ್ (23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








