ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫರ್ನಿಚರ್ ಅಂಗಡಿ ಹೊತ್ತಿ ಉರಿದು ಲಕ್ಷಾಂತರ ಮೌಲ್ಯದ ಫನಿರ್ಚರ್ ಸುಟ್ಟು ಕರಕಲಾದ ಘಟನೆ ನಗರದ ಮುಖ್ಯ ರಸ್ತೆ ಐಜಿ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಹಾಸಿಗೆ, ಬೀರು, ಕುಷನ್, ಸೋಫಾ ಸೆಟ್, ದಿವಾನ್ ಕಾಟ್ ಮುಂತಾದ ಫರ್ನಿಚರ್ ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿವೆ. ಹಾಸಿಗೆ, ಕುಷನ್ ಇದ್ದ ಕಾರಣ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಇನ್ನು ಮಾಹಿತಿ ತಿಳಿದ ಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕೂ ಮೊದಲು ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.








