ಆಂಧ್ರಪ್ರದೇಶ: ಕಾಕಿನಾಡ ಜಿಲ್ಲೆಯ ಸಮರಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ವರದಿಗಳ ಪ್ರಕಾರ, ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 18 ಜನರು ಸುಟ್ಟು ಕರಕಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕಾರ್ಖಾನೆಯೊಳಗೆ ಇನ್ನೂ ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಕಿಯಲ್ಲಿ 20 ಕಾರ್ಮಿಕರು ಸಿಲುಕಿಕೊಂಡಿದ್ದು, ಇದುವರೆಗೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಅಪಘಾತದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಅಧಿಕೃತ ಘೋಷಣೆಯ ನಂತರ ಪೂರ್ಣ ವಿವರಗಳು ಬಹಿರಂಗಗೊಳ್ಳಲಿವೆ. ಆದಾಗ್ಯೂ, ಬೆಂಕಿಯಲ್ಲಿ 20 ಕಾರ್ಮಿಕರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುವ ಅಪಾಯವಿದೆ ಎಂದು ಹೇಳಲಾಗುತ್ತಿದೆ.
BREAKING: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಮಧ್ಯಪ್ರಾಚ್ಯ ದೇಶಗಳಿಗೆ ಏರ್ ಇಂಡಿಯಾ ವಿಮಾನ ಸಂಚಾರ ಸ್ಥಗಿತ








