ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನ್ನೊಂದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಶಂಕರ ತಳವಾರ (25) ಎಂದು ತಿಳಿದು ಬಂದಿದೆ. ಎರಡು ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಹಾಗೂ ಮದುವೆ ಮುರಿದು ಬಿದ್ದಿತ್ತು. ಬಳಿಕ ಎಷ್ಟೇ ಹುಡುಕಿದರೂ ಕೂಡ ಹೆಣ್ಣು ಸಿಗದಕ್ಕೆ ಶಂಕರ್ ನೊಂದು ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಮೀನಿನಲ್ಲಿ ಕುರಿಗಾಹಿ ಯುವಕ ಶಂಕರ್ ನೇಣಿಗೆ ಶರಣಾಗಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








