ಬೆಳಗಾವಿ: ಜಿಲ್ಲೆಯ ಅಥಣಿಯಲ್ಲಿ ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಚಾಲಕರು ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.