ನವದೆಹಲಿ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಚರ್ಚೆಯ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಪ್ರದೇಶದಲ್ಲಿ ಉದ್ವಿಗ್ನತೆಯನ್ನ ತಕ್ಷಣ ಕಡಿಮೆ ಮಾಡುವಂತೆ ಒತ್ತಾಯಿಸಿದರು. ಭಯೋತ್ಪಾದನೆಯ ವಿರುದ್ಧ ಜಾಗತಿಕ ಏಕತೆಯ ನಿರ್ಣಾಯಕ ಅಗತ್ಯವನ್ನು ಮೋದಿ ಒತ್ತಿಹೇಳಿದರು ಮತ್ತು ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಕರೆ ನೀಡಿದರು.
“ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ. ಪ್ರಾದೇಶಿಕ ಉಲ್ಬಣವನ್ನ ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನ ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಸಾವನ್ನಪ್ಪಿದ ನಂತ್ರ ಈ ಪ್ರದೇಶವು ಹಗೆತನದಲ್ಲಿ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ. ಮಧ್ಯ ಬೈರುತ್ ಗುರಿಯಾಗಿಸಿಕೊಂಡು ನಡೆದ ವೈಮಾನಿಕ ದಾಳಿಯು 2006ರ ನಂತರ ನಗರದಲ್ಲಿ ನಡೆದ ಮೊದಲ ಬಾಂಬ್ ದಾಳಿಯಾಗಿದೆ. ಕಳೆದ ಎರಡು ವಾರಗಳಲ್ಲಿ 1,000 ಕ್ಕೂ ಹೆಚ್ಚು ಸಾವುನೋವುಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 100ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.
Spoke to Prime Minister @netanyahu about recent developments in West Asia. Terrorism has no place in our world. It is crucial to prevent regional escalation and ensure the safe release of all hostages. India is committed to supporting efforts for an early restoration of peace and…
— Narendra Modi (@narendramodi) September 30, 2024
ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
“50ಕ್ಕೂ ಹೆಚ್ಚು ಬಾರಿ ಅತ್ಯಾಚಾರ” : ಓಶೋ ಪಂಥದಲ್ಲಿ ‘ಲೈಂಗಿಕ ಆಘಾತ’ ನೆನಪಿಸಿಕೊಂಡ ಯುಕೆ ಮಹಿಳೆ