ಪಾಕಿಸ್ತಾನ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪಾಕಿಸ್ತಾನಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ದಕ್ಷಿಣ ವಜೀರಿಸ್ತಾನ್ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಲಕಿ ಮರ್ವಾಟ್ನಲ್ಲಿರುವ ಬರ್ಗೈ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್ಗಳು ಮತ್ತು ರಾಕೆಟ್ ಲಾಂಚರ್ಗಳು ಸೇರಿದಂತೆ ಮಾರಕ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ ನಂತರ ಶಂಕಿತ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಶಂಕಿತರ ಪತ್ತೆಗಾಗಿ ಪೊಲೀಸ್ ಪಡೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿದು ಬಂದಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮುಖ್ಯಮಂತ್ರಿ ಮೆಹಮೂದ್ ಖಾನ್, ದಾಳಿಯನ್ನು ಖಂಡಿಸಿದ್ದು, ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಯನ್ನು ಕೇಳಿದ್ದಾರೆ.
ಇನ್ನು ಅಧ್ಯಕ್ಷ ಆರಿಫ್ ಅಲ್ವಿಯವರು, ಮೃತಪಟ್ಟ ಪೊಲೀಸರಿಗೆ ಸಂತಾಪ ಸೂಚಿಸಿದ್ದು, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದುಹಾಕುವವರೆಗೆ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.
ಇದವರೆಗೆ ದಾಳಿಯ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲವಾದರೂ, ಜಿಲ್ಲೆಯಲ್ಲಿ ಪೊಲೀಸರ ಮೇಲಿನ ಹಿಂದಿನ ದಾಳಿಗಳನ್ನು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಹೇಳಿಕೊಂಡಿದೆ.
ಕಳೆದ ತಿಂಗಳು, ಉಗ್ರರು ಪೊಲೀಸ್ ಗಸ್ತು ವಾಹನದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಆರು ಪೊಲೀಸರನ್ನು ಸಾವನ್ನಪ್ಪಿದ್ದರು. ಪಾಕಿಸ್ತಾನಿ ತಾಲಿಬಾನ್ ದಾಳಿಯ ಹೊಣೆ ಹೊತ್ತುಕೊಂಡಿತ್ತು.
ಮಹಾರಾಷ್ಟ್ರದಲ್ಲಿ 12 ಗಂಟೆಗಳ ಕಾಲ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ; 8 ಆರೋಪಿಗಳು ಅರೆಸ್ಟ್
ರೈಲ್ವೆ ಪ್ರಯಾಣಿಕರೇ ಎಚ್ಚರ: ನೀವು ಇದನ್ನು ಮಾಡಿದ್ರೆ ಜೈಲಿಗೆ ಹೋಗುವಿರಿ ಹುಶಾರ್….!
ಜಾರ್ಖಂಡ್ನಲ್ಲಿ ಶ್ರದ್ಧಾ ತರಹದ ಕೊಲೆ: ಪತ್ನಿಯ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಪತಿ