ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 45 ವರ್ಷದ ಸಾಮಾಜಿಕ ಕಾರ್ಯಕರ್ತರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ತಡರಾತ್ರಿ ಕಂಡಿ ಖಾಸ್ನಲ್ಲಿರುವ ಗುಲಾಮ್ ರಸೂಲ್ ಮ್ಯಾಗ್ರೆ ಅವರ ನಿವಾಸದೊಳಗೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮ್ಯಾಗ್ರೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಉಗ್ರಗಾಮಿಗಳು ಸಾಮಾಜಿಕ ಕಾರ್ಯಕರ್ತನನ್ನು ಏಕೆ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.