ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಶಂಕಿತ ಭಯೋತ್ಪಾದಕರು ವಲಸೆ ಕಾರ್ಮಿಕನ ಮೇಲೆ ಗುಂಡು ಹಾರಿಸಿದ್ದಾರೆ.
ಉತ್ತರಾಖಂಡದ ಡೆಹ್ರಾಡೂನ್ ನಿವಾಸಿ ದಿಲ್ರನ್ಜೀತ್ ಸಿಂಗ್ ಅವರ ಮೇಲೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಹೆರ್ಪೊರಾ ಪ್ರದೇಶದಲ್ಲಿ ರಾತ್ರಿ 9 ಗಂಟೆಗೆ ಗುಂಡು ಹಾರಿಸಲಾಗಿದೆ. ಸಿಂಗ್ ಅವರನ್ನು ಶೋಪಿಯಾನ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿಂದ ಅವರನ್ನು ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.
ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.